ಪಾಟ್ನಾ/ಮುಜಾರ್ಪುರ್: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿಗೆ 'ಹುಚ್ಚ', 'ನರಭಕ್ಷಕ' ಎಂದೆಲ್ಲಾ ಅವಹೇಳನಕಾರಿಯಾಗಿ ಟೀಕಿಸಿದ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
'ಲಾಲು ವಿರುದ್ಧ ನಿನ್ನೆ ಸಚಿವಾಲಯ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮ್ಯಾಜಿಸ್ಟ್ರೇಟ್ ನೀಡಿದ ವರದಿ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ,' ಎಂದು ಉಪ ಚುನಾವಣಾ ಅಧಿಕಾರಿ ಆರ್.ಲಕ್ಷ್ಮಣ್ ಹೇಳಿದ್ದಾರೆ.
ಅಲ್ಲದೇ ಮುಜಾರ್ಪುರ್ ಜಿಲ್ಲೆಯ ಕಾಂತಿ ಠಾಣೆಯಲ್ಲಿಯೂ ಲಾಲು ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದ್ದು, ಐಪಿಸಿ ಹಾಗೂ ಪ್ರಜಾ ಪ್ರತಿನಿಧಿ ಕಾಯ್ದೆಯ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
↧
ಮೋದಿ 'ನರಭಕ್ಷಕ': ಲಾಲು ವಿರುದ್ಧ FIR
↧